ನವದೆಹಲಿ: ಪೂರ್ವ ಲಡಾಖ್‌ನ ಗೋಗ್ರಾ ಹಾಟ್ ಸ್ಪ್ರಿಂಗ್ಸ್ ಗಡಿ ಪ್ರದೇಶದಿಂದ ಸೇನಾ ವಾಪಸಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಭಾರತ ಮತ್ತು ಚೀನಾದ ಸೇನೆ ಗುರುವಾರ ತಿಳಿಸಿದೆ.
ಗಸ್ತು ಪಾಯಿಂಟ್ 15ರಲ್ಲಿ (ಪಿಪಿ 15) ಎರಡು ವರ್ಷಗಳಿಂದ ಉಭಯ ದೇಶಗಳು ಸೈನಿಕರನ್ನು ನಿಯೋಜಿಸಿದ್ದವು.
ಜುಲೈ ತಿಂಗಳಲ್ಲಿ ನಡೆದಿದ್ದ 16ನೇ ಸುತ್ತಿನ ಉನ್ನತ ಮಟ್ಟದ ಸೇನಾ ಮಾತುಕತೆಯ ಪರಿಣಾಮವಾಗಿ ಈ ಪ್ರದೇಶದಿಂದ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳಲಾಗುತ್ತಿದೆ ಎಂದು ಉಭಯ ದೇಶಗಳು ಹೇಳಿಕೆಯಲ್ಲಿ ತಿಳಿಸಿವೆ.
ಗಡಿಯಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಸೇನಾ ಪಡೆಯ ವಾಪಸಾತಿ ಪ್ರಕ್ರಿಯೆ ಯೋಜಿತ ರೀತಿಯಲ್ಲಿ ನಡೆಯುತ್ತಿದೆ ಎಂದೂ ಹೇಳಿವೆ.
ಉಜ್ಬೇಕಿಸ್ತಾನದಲ್ಲಿ ಮುಂದಿನ ವಾರ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ(ಎಸ್‌ಸಿಒ) ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಸಾಧ್ಯತೆ ಇದ್ದು, ಇದಕ್ಕೆ ಪೂರ್ವಭಾವಿಯಾಗಿ ಈ ಘೋಷಣೆ ಹೊರಬಂದಿದೆ.
ಎಸ್‌ಸಿಒ ಶೃಂಗಸಭೆಯಲ್ಲಿ ಉಭಯ ದೇಶಗಳ ನಾಯಕರ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವ ನಿರೀಕ್ಷೆ ಇದೆ ಎನ್ನಲಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.