ನವದೆಹಲಿ: ಸಿಯಾಚಿನ್ ಯುದ್ಧ ಭೂಮಿಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಮೊದಲ ಅಗ್ನಿವೀರ್ ಗವಟೆ ಅಕ್ಷಯ್ ಲಕ್ಷ್ಮಣ್ ಹುತಾತ್ಮರಾಗಿದ್ದು, ಅವರಿಗೆ ಭಾರತೀಯ ಸೇನೆ ಇಂದು (ಭಾನುವಾರ) ಶ್ರದ್ಧಾಂಜಲಿ ಸಲ್ಲಿಸಿದೆ.
ಭಾರತೀಯ ಸೇನೆಯ ಫೈರ್ ಆ್ಯಂಡ್ ಫ್ಯೂರಿ ಕಾರ್ಪ್ಸ್ ಮೃತ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದೆ.
ಅಕ್ಷಯ್ ಲಕ್ಷ್ಮಣ್ ಅವರ ತ್ಯಾಗಕ್ಕೆ ವಂದನೆ ಸಲ್ಲಿಸುತ್ತೇವೆ. ಈ ದುಃಖದ ಸಮಯದಲ್ಲಿ ಕುಟುಂಬದೊಂದಿಗೆ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಭಾರತೀಯ ಸೇನೆ ಪೋಸ್ಟ್ ಮಾಡಿದೆ.
ಸಿಯಾಚಿನ್ನಲ್ಲಿ ಜೂನ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸೇನಾ ಯೋಧ ಮೃತಪಟ್ಟರೆ, ಮೂವರು ಯೋಧರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.