ಪೋರ್ಟ್ ಬ್ಲೇರ್: ಅಂಡಮಾನ್ ಬಳಿ ಭಾರತೀಯ ಕರಾವಳಿ ಕಾವಲು ಪಡೆಯು 5.5 ಟನ್ (5,500 ಕೆ.ಜಿ) ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದೆ. ಡ್ರಗ್ಸ್ ಕಳ್ಳಸಾಗಣೆಗೆ ಬಳಸಲಾಗಿದ್ದ ಮ್ಯಾನ್ಮಾರ್ ಹಡಗನ್ನು ಕಡಲ ಕಣ್ಗಾವಲು ವಿಮಾನವು ಪತ್ತೆ ಮಾಡಿತ್ತು. ಇದು ಇತಿಹಾಸದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ವಶಪಡಿಸಿಕೊಂಡ ಅತಿದೊಡ್ಡ ಪ್ರಮಾಣದ ಡ್ರಗ್ಸ್ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನವೆಂಬರ್ 23ರಂದು ಆರಂಭವಾಗಿದ್ದ ಕಾರ್ಯಾಚರಣೆಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್, ಸ್ಥಳೀಯ ಪೊಲೀಸ್ ಮತ್ತು ಡ್ರಗ್ಸ್ ತಡೆ ಸಂಸ್ಥೆಗಳು ಪಾಲ್ಗೊಂಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.