ತಿರುವನಂತಪುರ: ಭಾರತೀಯ ಕರಾವಳಿ ಕಾವಲು ಪಡೆಯ (ಐಸಿಜಿ) ಹೆಲಿಕಾಪ್ಟರ್‌ವೊಂದು ಕೊಚ್ಚಿಯ ನೆಡುಂಬಸ್ಸೇರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಟೇಕ್–ಆಫ್ ವೇಳೆ ಪತನಗೊಂಡಿದೆ.
ಮೂಲಗಳ ಪ್ರಕಾರ, ಐಸಿಜಿಯ ಮೂವರು ಸಿಬ್ಬಂದಿ ಹೆಲಿಕಾಪ್ಟರ್‌ನಲ್ಲಿದ್ದರು. ಎಲ್ಲರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. ಪ್ರಕರಣದ ಬಳಿಕ ವಿಮಾನ ನಿಲ್ದಾಣದಲ್ಲಿ ಪ್ರಯಾಣ ರದ್ದುಪಡಿಸಲಾಗಿದೆ. ಇಲ್ಲಿಗೆ ಬರಬೇಕಿದ್ದ ವಿಮಾನಗಳನ್ನು ಸಮೀಪದ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ. ಇದು ದೊಡ್ಡ ದುರಂತವೇನಲ್ಲ. ರನ್‌ವೇಗೆ ಸಮೀಪದಲ್ಲೇ ಘಟನೆ ನಡೆದಿರುವುದರಿಂದ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಪತನದಿಂದ ಆಗಿದ್ದ ಹಾನಿ ಸರಿಪಡಿಸುವ ಕಾರ್ಯ ನಡೆಯುತ್ತಿದೆ. ವಿಮಾನ ನಿಲ್ದಾಣವನ್ನು ಸಂಜೆ ಪುನರಾರಂಭಿಸಲಾಗುವುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಐಸಿಜಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.