ADVERTISEMENT

Constitution Day | ಭಾರತ ಸಂವಿಧಾನ ಜೀವಂತ: ರಾಷ್ಟ್ರಪತಿ ದ್ರೌಪದಿ ಮುರ್ಮು

ಪಿಟಿಐ
Published 26 ನವೆಂಬರ್ 2024, 7:35 IST
Last Updated 26 ನವೆಂಬರ್ 2024, 7:35 IST
<div class="paragraphs"><p>ರಾಷ್ಟ್ರಪತಿ ದ್ರೌಪದಿ ಮುರ್ಮು</p></div>

ರಾಷ್ಟ್ರಪತಿ ದ್ರೌಪದಿ ಮುರ್ಮು

   

 ಪಿಟಿಐ ಚಿತ್ರ (ಸಂಗ್ರಹ ಚಿತ್ರ) 

ನವದೆಹಲಿ: ಭಾರತ ಸಂವಿಧಾನವು ಜೀವಂತ ಹಾಗೂ ಪ್ರಗತಿಪರ ದಾಖಲೆಯಾಗಿದೆ. ಈ ಮೂಲಕ ಸಮಾಜದಲ್ಲಿ ಸಾಮಾಜಿಕ ನ್ಯಾಯ ಮತ್ತು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದ್ದಾರೆ.

ADVERTISEMENT

ಸಂವಿಧಾನ ಅಂಗೀಕಾರದ 75 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ರಚನೆಗೆ ನೆರವಾದ ಮಹಿಳಾ ಸದಸ್ಯರ ಕೊಡುಗೆಯನ್ನು ಸ್ಮರಿಸಿದರು.

‘ನಮ್ಮ ಪ್ರಜಾಪ್ರಭುತ್ವದಲ್ಲಿ ಮಹಿಳಾ ಮೀಸಲಾತಿಯ ಕಾನೂನಿಂದಾಗಿ ಮಹಿಳಾ ಸಬಲೀಕರಣದ ಹೊಸ ಯುಗವನ್ನೇ ಪ್ರಾರಂಭಿಸಿದೆ ಎಂದು ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ.

ಮೈತೇಯಿ ಮತ್ತು ಸಂಸ್ಕೃತ ಭಾಷೆಯಲ್ಲಿರುವ ಸಂವಿಧಾನ ಆವೃತ್ತಿಗಳನ್ನು ಮುರ್ಮು ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.