ADVERTISEMENT

‌ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾದ 8 ಸಿಬ್ಬಂದಿಯನ್ನು ಭೇಟಿಯಾದ ಭಾರತದ ರಾಯಭಾರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2023, 13:40 IST
Last Updated 7 ಡಿಸೆಂಬರ್ 2023, 13:40 IST
<div class="paragraphs"><p>ಅರಿಂದಮ್ ಬಾಗ್ಚಿ</p></div>

ಅರಿಂದಮ್ ಬಾಗ್ಚಿ

   

ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಯನ್ನು ಭಾರತದ ರಾಯಭಾರಿ ಭೇಟಿಯಾಗಿದ್ದಾರೆ ಎಂದು ಸರ್ಕಾರ ಗುರುವಾರ ತಿಳಿಸಿದೆ. 

ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ , ‘ನಮ್ಮ ರಾಯಭಾರಿ ಡಿ.3 ರಂದು ಎಂಟು ಜನರನ್ನು ಭೇಟಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಗಲ್ಲುಶಿಕ್ಷೆಯ ಕುರಿತು ಭಾರತ ಸಲ್ಲಿಸಿದ ಮನವಿಯನ್ನು  ನ. 23 ರಂದು ಮತ್ತು ನ.30 ರಂದು ಎರಡು ಬಾರಿ ವಿಚಾರಣೆಗೆ ಒಳಪಡಿಸಲಾಗಿದೆ. ಇದು ಸೂಕ್ಷ್ಮ ವಿಷಯವಾಗಿರುವುದರಿಂದ, ಎಚ್ಚರಿಕೆಯಿಂದ ನಿರ್ಧಾರವನ್ನು ತಗೆದುಕೊಳ್ಳುತ್ತಿದ್ದೇವೆ. ಎಲ್ಲಾ ರೀತಿಯ ಕಾನೂನು ಮತ್ತು ಕಾನ್ಸುಲರ್ ಸಹಾಯವನ್ನು ಪಡೆದುಕೊಳ್ಳುತ್ತೇವೆ. ನಾವು ಏನೆಲ್ಲಾ ಮಾಡಬಹುದೋ ಅದನ್ನು ಮಾಡುತ್ತೇವೆ. ನಮ್ಮ ರಾಯಭಾರಿ ಅವರನ್ನು ಭೇಟಿಯಾಗಿರುವುದು ಧನಾತ್ಮಕ ಬೆಳವಣಿಗೆಯಾಗಿದೆ’ ಎಂದು ಹೇಳಿದ್ದಾರೆ.

ಮುಖ್ಯ ವಿಚಾರವೆಂದರೆ, ‘ಪ್ರಧಾನಿ ಮೋದಿ ಅವರು ದುಬೈನಲ್ಲಿ ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅವರನ್ನು ಸಿಒಪಿ 28 ಸಭೆಯಲ್ಲಿ ಭೇಟಿಯಾಗಿರುವುದನ್ನು ನೀವು ನೋಡಿದ್ದೀರಿ. ಅವರು ಒಟ್ಟಾರೆ ದ್ವಿಪಕ್ಷೀಯ ಸಂಬಂಧ ಮತ್ತು ಭಾರತೀಯ ಸಮುದಾಯಗಳ ಕುರಿತಾಗಿ ಉತ್ತಮ ಮಾತುಕತೆ ನಡೆಸಿದ್ದಾರೆ’ ಎಂದು ಬಾಗ್ಚಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.