ನವದೆಹಲಿ: ಭಾರತೀಯ ನೌಕಾಪಡೆಗೆ ಸೇರಿದ ಮಿಗ್ -29 ಕೆ ವಿಮಾನ ಗೋವಾದಲ್ಲಿ ಅಪಘಾತಕ್ಕೀಡಾಗಿದೆ.ತರಬೇತಿಗೆಂದು ಬಳಸಲಾಗುತ್ತಿದ್ದ ಈ ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರೆಂದು ತಿಳಿದುಬಂದಿದೆ. ವಿಮಾನ ಟೇಕ್ ಆಫ್ ಆಗುವ ಸಂದರ್ಭದಲ್ಲಿ ಈ ಘಟನೆ ನಡೆದದ್ದು, ಒಳಗಿದ್ದ ಪೈಲಟ್‌ಗಳನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಅಪಘಾತಕ್ಕೀಡಾದ ವಿಮಾನವು ಫೈಟರ್ ಜೆಟ್‌ನ ತರಬೇತಿ-ಆವೃತ್ತಿಯಾಗಿದೆ.
‘ಮಿಗ್–27 ಕೆತರಬೇತಿ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರ ಪರಿಣಾಮ ಈ ಅಪಘಾತ ಸಂಭವಿಸಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳಾದ ಕ್ಯಾಪ್ಟನ್ ಎಂ. ಶಿಯೋಖಂದ್ ಮತ್ತು ಲೆಪ್ಟಿನೆಂಟ್ಕಮಾಂಡರ್ ದೀಪಕ್ ಯಾದವ್ ಅವರನ್ನು ಸುರಕ್ಷಿತವಾಗಿ ಹೊರತರಲಾಗಿದೆ,’ ಎಂದು ಭಾರತೀಯ ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಾಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.