ADVERTISEMENT

ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಸೆಪ್ಟೆಂಬರ್ 2024, 10:21 IST
Last Updated 29 ಸೆಪ್ಟೆಂಬರ್ 2024, 10:21 IST
<div class="paragraphs"><p>ಉದಯನಿಧಿ ಸ್ಟಾಲಿನ್</p></div>

ಉದಯನಿಧಿ ಸ್ಟಾಲಿನ್

   

-ಪಿಟಿಐ ಚಿತ್ರ

ಚೆನ್ನೈ: ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಅವರು ಉಪ ಮುಖ್ಯಮಂತ್ರಿಯಾಗಿ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ADVERTISEMENT

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಉದಯನಿಧಿ ಸ್ಟಾಲಿನ್‌ ಸೇರಿದಂತೆ ನಿಯೋಜಿತ ಮಂತ್ರಿಗಳಿಗೆ ರಾಜ್ಯಪಾಲ ಆರ್.ಎನ್. ರವಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಉದಯನಿಧಿ ಸ್ಟಾಲಿನ್ ಅವರಿಗೆ ಉಪ ಮುಖ್ಯಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ನೀಡುವುದು, ವಿ. ಸೆಂಥಿಲ್ ಬಾಲಾಜಿ ಅವರನ್ನು ಮಂತ್ರಿ ಪರಿಷತ್ತಿಗೆ ಪುನಃ ಸೇರಿಸಿಕೊಳ್ಳುವುದು ಸೇರಿದಂತೆ ಸಂಪುಟದ ಪುನರ್‌ ರಚನೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾಡಿದ್ದ ಶಿಫಾರಸಿಗೆ ಈಚೆಗೆ ರಾಜ್ಯಪಾಲ ಆರ್.ಎನ್. ರವಿ ಅವರು ಅನುಮೋದನೆ ನೀಡಿದ್ದರು.

ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಾಲಾಜಿ ಅವರಿಗೆ ಈಚೆಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮನೋ ತಂಗರಾಜನ್ ಸೇರಿದಂತೆ ಒಟ್ಟು ಮೂವರು ಸಚಿವರನ್ನು ಕೈಬಿಡಲಾಗಿದೆ.

ಉದ್ಯೋಗಕ್ಕಾಗಿ ಹಣ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳು ತಮ್ಮನ್ನು ಬಂಧಿಸಿದ ಕೆಲವು ತಿಂಗಳುಗಳ ನಂತರ ಬಾಲಾಜಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಉದಯನಿಧಿ ಸ್ಟಾಲಿಸ್ ಅವರನ್ನು ಉಪ ಮುಖ್ಯಮಂತ್ರಿಯಾಗಿಸಬೇಕು ಮತ್ತು ಅವರಿಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಬೇಕು ಎಂದು ಮುಖ್ಯಮಂತ್ರಿ ಶಿಫಾರಸು ಮಾಡಿದ್ದರು ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.