ನವದೆಹಲಿ: ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಅಪಹರಿಸಿದ್ದ ಇರಾನ್ ಧ್ವಜ ಹೊಂದಿದ್ದ ‘ಇಮಾನ್’ ಮೀನುಗಾರಿಕಾ ಹಡಗಿನಲ್ಲಿದ್ದ 17 ಮಂದಿಯನ್ನು ರಕ್ಷಣೆ ಮಾಡಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಡಲ್ಗಳ್ಳರು ಹಡಗನ್ನು ಅಪಹರಿಸಿರುವ ಮಾಹಿತಿ ಅರಿತು ‘ಐಎನ್‌ಎಸ್ ಸುಮಿತ್ರಾ’ ನೌಕೆಯನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು ಎಂದು ನೌಕಾ ಪಡೆ ವಕ್ತಾರ ಕಮಾಂಡರ್ ವಿವೇಕ್ ಮಧ್ವಾಲ್ ಹೇಳಿದ್ದಾರೆ.
ಮೀನುಗಾರಿಕಾ ಹಡಗಿನ ಒಳಗೆ ಪ್ರವೇಶಿಸಿದ್ದ ಕಡಲ್ಗಳ್ಳರು, ಅದರ ಸಿಬ್ಬಂದಿಯನ್ನು ಒತ್ತೆಸೆರೆಯಲ್ಲಿಟ್ಟಿದ್ದರು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.