ಬೆಂಗಳೂರು: ದೇಶದಾದ್ಯಂತ ಕೋವಿಡ್ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 62 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 80,472 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,179 ಮಂದಿ ಮೃತಪಟ್ಟಿದ್ದಾರೆ.
ಒಟ್ಟು 62,25,764 ಪ್ರಕರಣಗಳ ಪೈಕಿ 9,40,441 ಸಕ್ರಿಯ ಪ್ರಕರಣಗಳಿದ್ದು, 51,87,826 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 97,497 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸೆಪ್ಟೆಂಬರ್ 29ರ ವರೆಗೂ ದೇಶದಲ್ಲಿ 7,41,96,729 ಗಂಟಲು ದ್ರವ ಮಾದರಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ಒಂದೇ ದಿನ 10,86,688 ಕೋವಿಡ್ ಪರೀಕ್ಷೆಗಳನ್ನು ನಡೆಸಿರುವುದಾಗಿ ಐಸಿಎಂಆರ್ ತಿಳಿಸಿದೆ.
ಮಹಾರಾಷ್ಟ್ರದಲ್ಲಿ 2,60,789 ಸಕ್ರಿಯ ಪ್ರಕರಣಗಳು, ಕರ್ನಾಟಕದಲ್ಲಿ 1,07,756 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 59,435 ಹಾಗೂ ಉತ್ತರ ಪ್ರದೇಶದಲ್ಲಿ 52,160 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಸಚಿವಾಲಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.