ಬೆಂಗಳೂರು: ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಘೋಷಿಸಿದೆ.
ಈ ಮೂಲಕ ವಿಕ್ರಮ್ ಲ್ಯಾಂಡರ್, ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆಗಿದೆ.
ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಗೆ ಇಳಿಯಿತು. ಈ ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಲಕ್ಷಾಂತರ ಮಂದಿ ಕಣ್ತುಂಬಿಕೊಂಡರು.
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತು. ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.