ADVERTISEMENT

2060ಕ್ಕೆ ಭಾರತದ ಜನಸಂಖ್ಯೆ 170 ಕೋಟಿ: ವಿಶ್ವಸಂಸ್ಥೆ ಅಂದಾಜು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜುಲೈ 2024, 8:05 IST
Last Updated 13 ಜುಲೈ 2024, 8:05 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ವಿಶ್ವಸಂಸ್ಥೆ: 2060ರ ದಶಕದ ಆರಂಭದಲ್ಲಿ ಭಾರತದ ಜನಸಂಖ್ಯೆ ಸುಮಾರು 1.7 ಶತಕೋಟಿಗೆ ತಲುಪಲಿದ್ದು, ಬಳಿಕ ಅದು ಶೇ 12 ರಷ್ಟು ಕುಸಿಯುವ ನಿರೀಕ್ಷೆಯಿದೆ. ಆದರೆ ಶತಮಾನದುದ್ದಕ್ಕೂ ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ದೇಶವಾಗಿ ಇರಲಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ADVERTISEMENT

ಗುರುವಾರ ಬಿಡುಗಡೆಯಾದ 'ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟ್ಸ್ 2024' ವರದಿಯ ಪ್ರಕಾರ, ಮುಂಬರುವ 50-60 ವರ್ಷಗಳಲ್ಲಿ ವಿಶ್ವದ ಜನಸಂಖ್ಯೆಯಲ್ಲಿ ಬೆಳವಣಿಗೆಯಾಗಲಿದೆ. 2080ರ ಮಧ್ಯದಲ್ಲಿ ವಿಶ್ವದ ಜನಸಂಖ್ಯೆ ಸುಮಾರು 10.3 ಶತಕೋಟಿಗೆ ತಲುಪುತ್ತದೆ. ಕಳೆದ ವರ್ಷ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತವು 2100ರ ವರೆಗೂ ಇದೇ ಸ್ಥಾನದಲ್ಲಿ ಮುಂದುವರಿಯಲಿದೆ ಎಂದು ಅಂದಾಜಿಸಿದೆ.

ವರದಿಯ ಪ್ರಕಾರ, 2024 ರಲ್ಲಿ ಭಾರತದ ಜನಸಂಖ್ಯೆಯು 1.45 ಶತಕೋಟಿ ಎಂದು ಅಂದಾಜಿಸಲಾಗಿದೆ ಮತ್ತು ಇದು 2054 ರಲ್ಲಿ 1.69 ಶತಕೋಟಿಗೆ ಏರುತ್ತದೆ. 2100 ರಲ್ಲಿ ಶತಮಾನದ ಅಂತ್ಯದ ವೇಳೆಗೆ, ಭಾರತದ ಜನಸಂಖ್ಯೆಯು 1.5 ಶತಕೋಟಿಗೆ ಕುಸಿಯುತ್ತದೆ ಎಂದು ಅಂದಾಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.