ನವದೆಹಲಿ: ಅಹಿಂಸಾತ್ಮಕ ಮಾರ್ಗಗಳ ಮೂಲಕ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ಜನರ ನಡುವೆ ಸೌಹಾರ್ದ ಮೂಡಿಸಲು ತಮ್ಮ ಜೀವನ ಮುಡಿಪಾಗಿಟ್ಟ ಡೇನಿಯಲ್ ಬ್ಯಾರೆನ್‌ಬೊಯಿಮ್ ಮತ್ತು ಅಲಿ ಅಬೂ ಅವ್ವಾದ್ ಅವರಿಗೆ 2023ರ ಸಾಲಿನ ‘ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ತೀರ್ಪುಗಾರರ ತಂಡವು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.
ಅರ್ಜೆಂಟೀನಾ ಮೂಲದ ಬ್ಯಾರೆನ್‌ಬೊಯಿಮ್ ಮತ್ತು ಪ್ಯಾಲೆಸ್ಟೀನ್‌ನ ಅವ್ವಾದ್ ಅವರು ಸಂಗೀತ, ಸಂವಾದ ಮತ್ತು ಜನರಲ್ಲಿ ಅರಿವು ಮೂಡಿಸುವ ಮೂಲಕ ಇಸ್ರೇಲ್– ಪ್ಯಾಲೆಸ್ಟೀನ್ ಸಂಘರ್ಷವನ್ನು ಕೊನೆಗಾಣಿಸಲು ಪ್ರಯತ್ನಿಸುತ್ತಾ ಬಂದಿದ್ದಾರೆ.
ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ವರ್ಚುವಲ್ ಆಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.