ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಉಗ್ರರ ಗುಂಪಿನ ಒಳ ನುಸುಳುವಿಕೆ ಯತ್ನವನ್ನು ಭಾರತೀಯ ಸೇನಾಪಡೆ ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಹಪುರ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ನಸುಕಿನ ವೇಳೆಯಲ್ಲಿ ಉಗ್ರರ ನುಸುಳುವ ಪ್ರಯತ್ನವನ್ನು ಸೇನಾಪಡೆ ವಿಫಲಗೊಳಿಸಿದೆ.
ಈ ವೇಳೆ ಉಗ್ರರು ಹಾಗೂ ಸೇನಾಪಡೆ ನಡುವೆ ಕೆಲಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಡೀ ಪ್ರದೇಶವನ್ನು ಸುತ್ತುವರಿದಿರುವ ಸೇನೆ, ತೀವ್ರ ಶೋಧ ಕಾರ್ಯ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.