ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳ ನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕಾಲಾ ಜಂಗಲ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಶುಕ್ರವಾರ ಕೇರನ್ ಸೆಕ್ಟರ್‌ನ ಜುಮಾಗುಂದ್ ಪ್ರದೇಶದಲ್ಲಿ ಒಳ ನುಸುಳುವಿಕೆ ಯತ್ನ ವಿಫಲಗೊಳಿಸಿದ್ದ ಭದ್ರತಾ ಪಡೆ, ಐವರು ಉಗ್ರರನ್ನು ಹತ್ಯೆಗೈದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.