ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಪರಿಣಾಮವಾಗಿ ನದಿ, ತೊರೆಗಳಲ್ಲಿನ ನೀರು ಮಂಜುಗಡ್ಡೆಯಾಗಿ ಬದಲಾಗಿದೆ. ಅಲ್ಲದೆ ಕೆಲವು ವಸತಿ ಪ್ರದೇಶಗಳಲ್ಲಿ ಕೊಳವೆಗಳಲ್ಲಿನ ನೀರು ಹೆಪ್ಪುಗಟ್ಟಿದೆ. ಇದರಿಂದಾಗಿ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಾಸವಾಗಿದೆ. ಹೀಗಾಗಿ ಚಳಿಯಿಂದ ಬಚಾವಾಗಲು ಜನರು ಅಗ್ಗಿಷ್ಟಿಕೆಯ ಮೊರೆಹೋಗಿದ್ದಾರೆ.
ದಿಢೀರ್ ತಾಪಮಾನ ಕುಸಿತದಿಂದಾಗಿ ಮಕ್ಕಳು ಮತ್ತು ವೃದ್ಧರಲ್ಲಿ ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ.
ಶ್ರೀನಗರದಲ್ಲಿ ನಿನ್ನೆ (ಸೋಮವಾರ) ರಾತ್ರಿ ಮೈನಸ್ 3.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಗುಲ್ಮಾರ್ಗ್‌ನಲ್ಲಿ ಮೈನಸ್ 6.6 ಡಿಗ್ರಿ ಸೆಲ್ಸಿಯಸ್ ಹಾಗೂ ಬಾರಾಮುಲ್ಲಾದಲ್ಲಿ ಮೈನಸ್ 8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಖಾಜಿಗುಂಡ್‌ನಲ್ಲಿ ಮೈನಸ್ 4.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.