ADVERTISEMENT

ಜುಲೈ 23ರ ವರೆಗೆ ದೇಶದ ಪಶ್ಚಿಮ ಕರಾವಳಿಯಲ್ಲಿ ಭಾರಿ ಮಳೆ: ಐಎಂಡಿ

ಪಿಟಿಐ
Published 18 ಜುಲೈ 2021, 8:35 IST
Last Updated 18 ಜುಲೈ 2021, 8:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದ ಪಶ್ಚಿಮ ಕರಾವಳಿಯಲ್ಲಿ ಜುಲೈ 23ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಉತ್ತರ ಭಾರತದಲ್ಲಿ ಜುಲೈ 21ರ ವರೆಗೆ ಭಾರಿ ಮಳೆಯಾಗಲಿದೆ. ನಂತರ ಮಳೆಯ ತೀವ್ರತೆ ಕಡಿಮೆಯಾಗುವುದು ಎಂದೂ ಐಎಂಡಿ ಹೇಳಿದೆ.

‘ಉತ್ತರ ಪ್ರದೇಶ, ಗುಜರಾತ್‌, ಮಧ್ಯಪ್ರದೇಶ ಹಾಗೂ ರಾಜಸ್ಥಾನದ ಪೂರ್ವ ಭಾಗದ ಕೆಲವು ಪ್ರದೇಶಗಳಲ್ಲಿ ಗುಡುಗು–ಸಿಡಿಲಿನೊಂದಿಗೆ ಮಳೆ ಬೀಳುವ ಸಾಧ್ಯತೆಗಳಿವೆ’ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ADVERTISEMENT

ಸೋಮವಾರ (ಜುಲೈ 19) ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ವಾಯವ್ಯ ಭಾಗದಲ್ಲಿ ಧಾರಾಕಾರ ಮಳೆ ಬೀಳಲಿದೆ. ಈ ಅವಧಿಯಲ್ಲಿ ಪಶ್ಚಿಮ ಹಾಗೂ ದಕ್ಷಿಣ ಭಾರತದಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.