ಭುವನೇಶ್ವರ: ಅಂತರರಾಜ್ಯ ವನ್ಯಜೀವಿಗಳ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಅಧಿಕಾರಿಗಳು ಐದು ಚಿರತೆ ಚರ್ಮಗಳು, ಫಿಶಿಂಗ್ ಕ್ಯಾಟ್, ಅಪಾರ ಪ್ರಮಾಣದಲ್ಲಿ ಪ್ಯಾಂಗೊಲಿನ್‌ಗಳು ಸೇರಿದಂತೆ ಅನೇಕ ವನ್ಯ ಜೀವಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಶಾಂತ್ ನಂದಾ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ಈ ದಂಧೆಯ ಕಿಂಗ್‌ಪಿನ್ ಅನ್ನು ಬಂಧಿಸುವ ನಿಟ್ಟಿನಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.
ಬಂಧಿತ ಆರೋಪಿಗಳನ್ನು ಗಜಪತಿ ಜಿಲ್ಲಾ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ ಎಂದು ನಂದಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.