ಬೆಂಗಳೂರು: ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ.
ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು, ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.
2007ರಲ್ಲಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಿತು. ಅಂದಿನಿಂದ ಜಾಗತಿಕವಾಗಿ ಪ್ರತಿ ವರ್ಷ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ.
1988ರಲ್ಲಿ ಹಲವು ಪ್ರಜಾಪ್ರಭುತ್ವ ಒಕ್ಕೂಟ ಸಂಸ್ಥೆಗಳು ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ‘ ಆಚರಣೆ ಮಾಡಬೇಕು ಎಂಬ ನಿರ್ಣಯ ಕೈಗೊಂಡವು. ನಂತರದ ದಿನಗಳಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆಗೆ ಕಳುಹಿಸಿಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.