ADVERTISEMENT

ಯೋಗ-ಸಂಗೀತದ ಭಾರತೀಯರ ಜೀವನ ಶೈಲಿಯೇ ಅದ್ಭುತ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 3:11 IST
Last Updated 21 ಜೂನ್ 2024, 3:11 IST
<div class="paragraphs"><p>ನವದೆಹಲಿಯಲ್ಲಿ ಇಂದು ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚಾರಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಅವರು ಪಾಲ್ಗೊಂಡ ಕ್ಷಣ.</p></div>

ನವದೆಹಲಿಯಲ್ಲಿ ಇಂದು ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚಾರಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಅವರು ಪಾಲ್ಗೊಂಡ ಕ್ಷಣ.

   

ನವದೆಹಲಿ: ಯೋಗ- ಸಂಗೀತ ಸಹಿತ ಭಾರತೀಯರ ಜೀವನ ಶೈಲಿ, ಪದ್ಧತಿ ಅದ್ಭುತವಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು.

ದೆಹಲಿಯಲ್ಲಿ ಇಂದು ಬೆಳಗ್ಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಮಾತನಾಡಿದ ಸಚಿವರು, ಭಾರತೀಯ ಕೌಟುಂಬಿಕ ಪದ್ಧತಿ, ಆಹಾರ ಪದ್ದತಿ ಮತ್ತು ವ್ಯಾಯಾಮ ಪದ್ಧತಿಗಳು ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿವೆ ಎಂದು ಪ್ರತಿಪಾದಿಸಿದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ಭಾರತೀಯರು ಬದಲಾದ ಜೀವನ ಶೈಲಿಗೆ ಮಾರು ಹೋಗುತ್ತಿದ್ದರು. ಯೋಗಾಸನ, ಪ್ರಾಣಾಯಾಮ, ಸಂಗೀತ ಮತ್ತು ಸಾಂಪ್ರದಾಯಿಕ ಆಹಾರ ಪದ್ಧತಿಗಳಿಂದ ದೂರಾಗುತ್ತಿದ್ದುದು ದೌರ್ಭಾಗ್ಯವೇ ಸರಿ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2014ರ ನಂತರ ಯೋಗದ ಮಹತ್ವವನ್ನು ಸಾರಿ, ಸಾದರಪಡಿದರು. ಈ ಮೂಲಕ ಭಾರತೀಯರಲ್ಲಿ ದೇಸಿ ಯೋಗ ಪದ್ಧತಿ, ಆಹಾರ ಪದ್ಧತಿ, ಸಂಗೀತ- ಸಂಪ್ರದಾಯಗಳನ್ನು ಮರು ಪ್ರತಿಷ್ಠಾಪಿಸುತ್ತಿದ್ದಾ ರೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಜಗತ್ತೇ ಅನುಸರಿಸ್ತಿದೆ: ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಘೋಷಿಸಿ, ಭಾರತೀಯರೆಲ್ಲ ಪಾಲಿಸುವಂತೆ ಪ್ರೇರೇಪಿಸಿದ್ದು, ಈಗ ಜಗತ್ತೇ ಮೋದಿ ಅವರ ಯೋಗ ಕಾರ್ಯ- ಕ್ರಮವನ್ನು ಅನುಸರಿಸುತ್ತಿದೆ. ವಿವಿಧ ರಾಷ್ಟ್ರಗಳು ಯೋಗ ಆಚರಣೆಯಲ್ಲಿ ತೊಡಗಿವೆ ಎಂದು ಜೋಶಿ ಹೇಳಿದರು.

ಜಮ್ಮು-ಕಾಶ್ಮೀರಿಗರ ಶಕ್ತಿ ಮೋದಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಜಮ್ಮು ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಶೇಷತೆ ಮೆರೆದಿದ್ದಾರೆ. ಅಲ್ಲಿನವರಿಗೆ ಒಂದು ಶಕ್ತಿ, ಧೈರ್ಯದ ರೂಪದಲ್ಲಿ ಸಾಕಾರ ಮೂರ್ತಿಯಾಗಿ ಅವರೊಂದಿಗೆ ನಿಂತಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೆಮ್ಮೆ ವ್ಯಕ್ತಪಡಿಸಿದರು.

ಉತ್ತಮ ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ನಾವೆಲ್ಲರೂ ಪ್ರತಿದಿನ ಯೋಗಾಭ್ಯಾಸ ಮಾಡುವ ಪ್ರತಿಜ್ಞೆ ಮಾಡೋಣ ಎಂದು ಇದೇ ವೇಳೆ ಕರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.