ನವದೆಹಲಿ: ಏರ್‌ಸೆಲ್–ಮ್ಯಾಕ್ಸಿಸ್ ಹಗರಣ ಸಂಬಂಧ ತನಿಖೆ ಎದುರಿಸುತ್ತಿರುವ ಕಾರ್ತಿ ಚಿದಂಬರಂಗೆ ಮೇ ಮತ್ತು ಜೂನ್ ತಿಂಗಳಲ್ಲಿ ವಿದೇಶ ಪ್ರವಾಸ ಕೈಗೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಅಮೆರಿಕ, ಜರ್ಮನಿ, ಸ್ಪೈನ್ ದೇಶಗಳಿಗೆ ತೆರಳಲು ಅನುವು ಮಾಡಿಕೊಟ್ಟಸುಪ್ರೀಂ, ₹10 ಕೋಟಿ ಠೇವಣಿ ಇರಿಸುವಂತೆ ಹೇಳಿದೆ.
ಮುಖ್ಯ ನ್ಯಾಯಾಮೂರ್ತಿಗಳಾದ ರಂಜನ್ ಗೊಗೊಯಿ ಹಾಗೂ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ಆದೇಶ ಹೊರಡಿಸಿದ್ದು, ಈ ಹಿಂದೆ ವಿಧಿಸಿದ್ದ ನಿಯಮಗಳು ಈಗಲೂ ಅನ್ವಯವಾಗಲಿದೆ ಎಂದು ಹೇಳಿದೆ.
ಜೊತೆಗೆ ಕೇಂದ್ರ ಹಣಕಾಸು ಮಾಜಿ ಸಚಿವ ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ವಿಶೇಷ ನ್ಯಾಯಾಲಯ ಮೇ 30ರವರೆಗೆ ಮುಂದುವರಿಸಿ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: ಬಂಧನದ ಭೀತಿಯಿಂದ ಕಾರ್ತಿ, ಚಿದಂಬರಂ ನಿರಾಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.