ಮುಂಬೈ: ಹಿರಿಯ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರು ಮಹಾರಾಷ್ಟ್ರದ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿಪಿ) ಮಂಗಳವಾರ ಅಧಿಕಾರ ವಹಿಸಿಕೊಂಡರು.
ಈ ಮೂಲಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸ್ಥಾನಕ್ಕೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
1988ನೇ ಬ್ಯಾಚಿನ ಐಪಿಎಸ್ ಅಧಿಕಾರಿ, 59 ವರ್ಷದ ಶುಕ್ಲಾ ಅವರನ್ನು ಸಶಸ್ತ್ರ ಸೀಮಾ ದಳದ ಡಿಜಿಪಿಯಾಗಿ ನಿಯೋಜಿಸಲಾಗಿತ್ತು.
ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ಅವಧಿಯಲ್ಲಿ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಇವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಸಂಬಂಧ ಶುಕ್ಲಾ ವಿರುದ್ಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು 2023ರ ಸೆಪ್ಟೆಂಬರ್‌ನಲ್ಲಿ ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.