ADVERTISEMENT

ಧೋನಿ ದಾಖಲಿಸಿದ್ದ ಪ್ರಕರಣ: ಐಪಿಎಸ್‌ ಅಧಿಕಾರಿಗೆ 15 ದಿನ ಜೈಲು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 16:31 IST
Last Updated 15 ಡಿಸೆಂಬರ್ 2023, 16:31 IST
Closeup Of Judges Gavel, Legal Code, Scales Of Justice On The Rough Wooden Background. Law Concept
Closeup Of Judges Gavel, Legal Code, Scales Of Justice On The Rough Wooden Background. Law Concept   

ಚೆನ್ನೈ:  ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ ದಾಖಲಿಸಿದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಜಿ.ಸಂಪತ್‌ಕುಮಾರ್‌ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿ ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ತನ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಂಪತ್‌ ಕುಮಾರ್ ಅವರಿಗೆ ಅನುಕೂಲವಾಗಲು ತೀರ್ಪನ್ನು 30 ದಿನಗಳ ಕಾಲ ಹೈಕೋರ್ಟ್‌ ಅಮಾನತಿನಲ್ಲಿಟ್ಟಿದೆ. 

ತೀರ್ಪನ್ನು ಅಮಾನತಿನಲ್ಲಿಡುವಂತೆ ಸಂಪತ್‌ಕುಮಾರ್‌ ಮನವಿ ಮಾಡಿರಲಿಲ್ಲ.

ADVERTISEMENT

ನ್ಯಾಯಮೂರ್ತಿಗಳಾದ ಎಸ್‌.ಎಸ್‌.ಸುಂದರ್‌ ಹಾಗೂ ಸುಂದರಮೋಹನ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

2013ರ ಐಪಿಎಲ್‌ ಬೆಟ್ಟಿಂಗ್‌ ಹಗರಣಕ್ಕೆ ತಮಗೆ ನಂಟಿದೆ ಎಂಬುದಾಗಿ ಸಂಪತ್‌ಕುಮಾರ್‌ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ವಿರುದ್ಧ ಧೋನಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.  

ಈ ವಿಚಾರವಾಗಿ ಪ್ರತಿಕ್ರಿಯಿಸುವ ವೇಳೆ, ಸಂಪತ್‌ಕುಮಾರ್‌ ಅವರು ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದರು ಎಂದು ದೂರಿದ್ದ ಧೋನಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.