ನವದೆಹಲಿ: ಗೋವಾದ ನೈಟ್ ಕ್ಲಬ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಐಪಿಎಸ್ ಅಧಿಕಾರಿಯನ್ನು ಕೇಂದ್ರ ಗೃಹ ಇಲಾಖೆ ಅಮಾನತು ಮಾಡಿದೆ.
2009ರ ತಂಡದ ಐಪಿಎಸ್ ಅಧಿಕಾರಿಯಾದ ಇವರು ಅರುಣಾಚಲ ಪ್ರದೇಶ, ಗೋವಾ, ಮೀಜೊರಾಂ ಮತ್ತು ಕೇಂದ್ರಾಡಳಿತ ಪ್ರದೇಶ (AGMUT) ಕೇಡರ್‌ನ ಅಧಿಕಾರಿಯಾಗಿದ್ದರು. ಘಟನೆಯ ನಂತರ ಕೇಂದ್ರ ಗೃಹ ಇಲಾಖೆಯು ರಾಜ್ಯ ಸರ್ಕಾರದಿಂದ ವರದಿ ಕೇಳಿತ್ತು.
ವರದಿ ಆಧರಿಸಿ ಈ ಕ್ರಮವನ್ನು ಗೃಹ ಇಲಾಖೆ ಕೈಗೊಂಡಿದೆ. ಅಮಾನತು ಆದೇಶ ಜಾರಿಯಲ್ಲಿರುವವರೆಗೂ ಪೂರ್ವಾನುಮತಿ ಇಲ್ಲದೆ ಸ್ಥಳವನ್ನು ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.
ಡಿಐಜಿ ಕೇಡರ್‌ನ ಅಧಿಕಾರಿಯಾದ ಇವರನ್ನು ಆರಂಭದಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು.
ಆರೋಪ ಹೊತ್ತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಗೋವಾ ಫಾರ್ವರ್ಡ್ ಪಾರ್ಟಿಯ ಶಾಸಕ ವಿಜಯ್ ಸರ್ದೇಸಾಯಿ ಅವರು ಈ ವಿಷಯವನ್ನು ರಾಜ್ಯ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.