ನವದೆಹಲಿ: ಭಾರತೀಯ ರೈಲ್ವೆ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (ಐಆರ್‌ಟಿಸಿ) ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿದೇವಿ ಹಾಗೂ ಪುತ್ರ ತೇಜಸ್ವಿ ಯಾದವ್‌ಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಅವರು ಆರೋಪಿಗಳಿಂದ ತಲಾ ₹1 ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಮುಚ್ಚಳಿಕೆ ಬರೆಸಿಕೊಂಡು ಜಾಮೀನುನೀಡಿದ್ದಾರೆ.
ಮಧ್ಯಂತರ ಜಾಮೀನಿನ ಅವಧಿ ಸೋಮವಾರಕ್ಕೆ ಮುಗಿದಿತ್ತು. ನ್ಯಾಯಾಲಯ ಇದಕ್ಕೂ ಮೊದಲು ಇದೇ ಜ.19ರವರೆಗೆ ಆರೋಪಿಗಳಿಗೆ ಜಾಮೀನು ನೀಡಿತ್ತು.
ಲಾಲು ಅವರು ರೈಲ್ವೆ ಸಚಿವರಾಗಿದ್ದಾಗ ಐಆರ್‌ಸಿಟಿಸಿಯ ಎರಡು ಹೊಟೇಲ್‌ಗಳ ನಿರ್ವಹಣೆಯ ಗುತ್ತಿಗೆಯನ್ನು ಖಾಸಗಿ ಕಂಪನಿಗೆ ನೀಡುವಾಗ ಅಕ್ರಮ ಹಣ ವರ್ಗಾವಣೆ ಮಾಡಿರುವ ಬಗ್ಗೆ ಸಿಬಿಐ ದಾಖಲಿಸಿರುವ ಪ್ರಕರಣ ಇದು.
ಲಾಲು ಅವರು ಈಗಾಗಲೇ ಮೇವು ಹಗರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದು, 2017ರ ಡಿಸೆಂಬರ್‌ನಿಂದ ರಾಂಚಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.