ADVERTISEMENT

ಕೊಚ್ಚಿ | ನನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆಯೇ? ಎಂದು ಪ್ರಶ್ನಿಸಿದ ಪ್ರಯಾಣಿಕನ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2024, 5:27 IST
Last Updated 11 ಆಗಸ್ಟ್ 2024, 5:27 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ತಿರುವನಂತಪುರ: ನನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆಯಾ? ಎಂದು ಪ್ರಶ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಹೌದು, ಏರ್ ಇಂಡಿಯಾ AI 682 ವಿಮಾನದಲ್ಲಿ ಕೊಚ್ಚಿಯಿಂದ ಮುಂಬೈಗೆ ತೆರಳುತ್ತಿದ್ದ 42 ವರ್ಷದ ಮನೋಜ್ ಕುಮಾರ್‌ನನ್ನು ಬಂಧಿಸಲಾಗಿದೆ. ಈತ ಬ್ಯಾಗೇಜ್ ಚೆಕ್‌ ಪಾಯಿಂಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಸಿಐಎಸ್ಎಫ್ ಅಧಿಕಾರಿಯೊಂದಿಗೆ ಕಠಿಣವಾಗಿ ವರ್ತಿಸಿದ್ದು, ‘ನನ್ನ ಬ್ಯಾಗ್‌ನಲ್ಲಿ ಬಾಂಬ್ ಏನಾದರೂ ಇದೆಯೇ?’ ಎಂದು ವಾಗ್ವಾದ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮನೋಜ್ ಕುಮಾರ್ ಹೇಳಿಕೆಯಿಂದ ಆತಂಕಗೊಂಡ ಅಧಿಕಾರಿಗಳು, ಕೂಡಲೇ ತಪಾಸಣೆ ನಡೆಸುವಂತೆ ವಿಮಾನ ನಿಲ್ದಾಣದ ಭದ್ರತಾ ತಂಡ ಸಿಬ್ಬಂದಿಗೆ ಸೂಚಿಸಿದ್ದರು. ಕೂಡಲೇ ಎಚ್ಚೆತ್ತ ಬಾಂಬ್‌ ನಿಷ್ಕ್ರಿಯ ದಳವು (ಬಿಡಿಡಿಎಸ್) ಶೋಧ ನಡೆಸಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಆದರೂ ಮನೋಜ್‌ನನ್ನು ಹೆಚ್ಚಿನ ತನಿಖೆಗಾಗಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸಿಐಎಸ್ಎಫ್ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.