ಬೆಂಗಳೂರು: ಬಾಹ್ಯಾಕಾಶದಲ್ಲಿ ಉಪಗ್ರಹದಿಂದ ಸೆರೆ ಹಿಡಿಯಲಾದ ಅಯೋಧ್ಯೆ ರಾಮ ಮಂದಿರದ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಬಿಡುಗಡೆಗೊಳಿಸಿದೆ.
ಈ ಚಿತ್ರವನ್ನು ಹೈದರಾಬಾದ್‍ನ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಕೇಂದ್ರವು ಹಂಚಿಕೊಂಡಿದೆ.
ಕಳೆದ ವರ್ಷ ಡಿಸೆಂಬರ್ 16ರಂದು ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರವನ್ನು ತೆಗೆಯಲಾಗಿದೆ.
ದಶರಥ ಮಹಲ್, ಅಯೋಧ್ಯೆ ರೈಲ್ವೆ ನಿಲ್ದಾಣ ಹಾಗೂ ಸರಯುೂ ನದಿಯನ್ನು ಚಿತ್ರದಲ್ಲಿ ಕಾಣಬಹುದಾಗಿದೆ.
ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಸೋಮವಾರ (ನಾಳೆ) ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.