ನವದೆಹಲಿ: ಶಿಶು ಆಹಾರದಲ್ಲಿನ ಸಕ್ಕರೆ ಅಂಶ, ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರ ಹಕ್ಕುಗಳ ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆಗೆ ಮುಂದಾಗಿದೆ.
ಡಿಎಂಕೆ ಸಂಸದೆ ಕನಿಮೊಳಿ ನೇತೃತ್ವದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಪೆಟ್ರೋಲ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಅಗತ್ಯ ವಸ್ತುಗಳು ಗ್ರಾಹಕರಿಗೆ ಸುಲಭವಾಗಿ ಲಭ್ಯವಾಗುವುದನ್ನು ಖಾತ್ರಿಪಡಿಸುವುದು, ಎಫ್‌ಸಿಐ ಉಗ್ರಾಣಗಳಲ್ಲಿ ಆಹಾರಧಾನ್ಯಗಳು ಹಾಳಾಗುವುದನ್ನು ತಡೆಯಲು ತ್ವರಿತ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಮಿತಿ ಚರ್ಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.