ADVERTISEMENT

ಮಹಾರಾಷ್ಟ್ರ: ಆದಿತ್ಯ ಠಾಕ್ರೆ, ಅನಿಲ್ ಪರಬ್ ಆಪ್ತರ ಮನೆ ಮೇಲೆ ಐಟಿ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮಾರ್ಚ್ 2022, 11:08 IST
Last Updated 8 ಮಾರ್ಚ್ 2022, 11:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನಾ ನಾಯಕ, ಸಚಿವ ಆದಿತ್ಯ ಠಾಕ್ರೆ ಹಾಗೂ ಅನಿಲ್ ಪರಬ್ ಅವರ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಆದಿತ್ಯ ಠಾಕ್ರೆ ಹಾಗೂ ಅನಿಲ್ ಪರಬ್ ಆಪ್ತರು ಮುಂಬೈ, ಪುಣೆಗಳಲ್ಲಿ ಹೊಂದಿರುವ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT