ADVERTISEMENT

ಈ ಚುನಾವಣೆ ನಿರುದ್ಯೋಗ, ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ; ಪ್ರಿಯಾಂಕಾ

ಪಿಟಿಐ
Published 7 ಮೇ 2024, 4:50 IST
Last Updated 7 ಮೇ 2024, 4:50 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ</p></div>

ಪ್ರಿಯಾಂಕಾ ಗಾಂಧಿ ವಾದ್ರಾ

   

(ಪಿಟಿಐ ಚಿತ್ರ)

ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಈ ಚುನಾವಣೆಯು ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ ನಡೆಸುವುದಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‍ಪೋಸ್ಟ್‌ ಹಂಚಿಕೊಂಡಿರುವ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಈ ಚುನಾವಣೆಯು ಸಂವಿಧಾನ ಮತ್ತು ಪ್ರಜಾ‍ಪ್ರಭುತ್ವ ರಕ್ಷಿಸುವ ಚುನಾವಣೆಯಾಗಿದೆ ಎಂದು ವಾದ್ರಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಪ್ರೀತಿಯ ದೇಶ‌ದ ಜನರೆ, ನಿಮ್ಮ ಪ್ರತಿಯೊಂದು ಮತವೂ ಅಮೂಲ್ಯವಾದ್ದದ್ದು. ವಿವೇಚನೆಯನ್ನು ಬಳಿಸಿ ಮತ ಚಲಾಯಿಸಿ, ನಿಮ್ಮ ಒಂದು ಮತವು ನಿಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ನಿರ್ಧರಿಸುತ್ತದೆ‘ ಎಂದು ಹೇಳಿದ್ದಾರೆ.

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 93 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8.39 ಕೋಟಿ ಮಹಿಳಾ ಮತದಾರರು ಸೇರಿದಂತೆ 17.24 ಕೋಟಿ ಮತದಾರರು ಮೂರನೇ ಹಂತದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.