ADVERTISEMENT

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನಕ್ಕೆ ಸಕಾಲ: ಉಪರಾಷ್ಟ್ರಪತಿ ಧನಕರ್ ಪ್ರತಿಪಾದನೆ

ಪಿಟಿಐ
Published 4 ಜುಲೈ 2023, 11:37 IST
Last Updated 4 ಜುಲೈ 2023, 11:37 IST
ಜಗದೀಪ್ ಧನಕರ್
ಜಗದೀಪ್ ಧನಕರ್   

ಗುವಾಹಟಿ (ಪಿಟಿಐ): ‘ಸಂವಿಧಾನದ ಪಿತಾಮಹರ ಆಲೋಚನೆಯ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಅನುಷ್ಠಾನಕ್ಕೆ ತರಲು ಕಾಲ ಸನ್ನಿಹಿತವಾಗಿದೆ’ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಂಗಳವಾರ ಹೇಳಿದ್ದಾರೆ.

ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಂವಿಧಾನವನ್ನು ರೂಪಿಸಿದ್ದವರ ಆಲೋಚನೆಯ ಪ್ರಕ್ರಿಯೆಯಲ್ಲೂ ಏಕರೂಪ ನಾಗರಿಕ ಸಂಹಿತೆಯ ಚಿಂತನೆಗಳಿದ್ದವು.

ಅದರಂತೆ ಸಂವಿಧಾನದ 44ನೇ ವಿಧಿಯು ನಾಗರಿಕರಿಗೆ ಸುರಕ್ಷತೆಯನ್ನು ಕಲ್ಪಿಸಲು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ. ಹಾಗಾಗಿ, ಯುಸಿಸಿಯ ಅನುಷ್ಠಾನಕ್ಕೆ ಕಾಲವು ಸನ್ನಿಹಿತವಾಗಿದ್ದು, ಇದಕ್ಕೆ ಯಾವುದೇ ರೀತಿಯ ಅಡ್ಡಿ ಅಥವಾ ವಿಳಂಬವಾಗಲಿ ಸಲ್ಲದು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.