ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಈ ಘಟನೆಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ವಿಷಯ ತಿಳಿದ ನಂತರ, ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿ, ಪ್ರದೇಶವನ್ನು ಸುತ್ತುವರಿದವು. ಈ ವೇಳೆ, ಉಗ್ರರು ಭದ್ರತಾ ಪಡೆಗಳನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ದಾಳಿ ನಡೆಸಿದಾಗ, ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.