ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಮೇಲೆ ನಡೆದಿದ್ದ ಉಗ್ರರ ದಾಳಿ ಪ್ರಕರಣ ಸಂಬಂಧ 50 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಈ ಪ್ರಕರಣದ ಸಮಗ್ರ ತನಿಖೆ ಮತ್ತು ಭಯೋತ್ಪಾದಕರ ಪತ್ತೆಗಾಗಿ ರಿಯಾಸಿ ಜಿಲ್ಲೆಯ ದೂರದ ಅರ್ನಾಸ್ ಹಾಗೂ ಮಾಹೌರ್ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ವಿಸ್ತರಿಸಲಾಗಿದೆ. ಈ ಪ್ರದೇಶಗಳು 1995 ಮತ್ತು 2005ರ ನಡುವೆ ಉಗ್ರರ ಅಡಗುದಾಣಗಳಾಗಿದ್ದವು.
ಈಗಾಗಲೇ ಪೊಲೀಸರು ಉಗ್ರರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಿಸಲಾಗಿದೆ.
ಮಾತಾ ವೈಷ್ಣೋದೇವಿಗೆ ಹೋಗುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಾನುವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.