ಜಮ್ಮು: ಶಂಕಾಸ್ಪದ ಚಟುವಟಿಕೆಗಳ ಬಗೆಗಿನ ಮಾಹಿತಿಯ ಆಧಾರದಲ್ಲಿ ಭದ್ರತಾ ಸಿಬ್ಬಂದಿ ಸೋಮವಾರ ಜಮ್ಮು, ಡೊಡಾ ಮತ್ತು ರಿಯಾಸಿ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದರು.
ಶಸ್ತ್ರಾಸ್ತ್ರಧಾರಿಗಳಂತೆ ಮೂವರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ ಬಗ್ಗೆ ಸ್ಥಳೀಯ ನಾಗರಿಕರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಅಖ್ನೂರ್ ಸೆಕ್ಟರ್‌ನ ಹಲವೆಡೆ ಸೋಮವಾರ ಮುಂಜಾನೆ ಜಂಟಿ ಕಾರ್ಯಾಚರಣೆ ನಡೆಸಿದರು. ಯಾವುದೇ ಅನುಮಾನಾಸ್ಪದ ಚಟವಟಿಕೆ ಕಂಡುಬಂದಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೊಡಾ ಜಿಲ್ಲೆಯಲ್ಲಿ ಭಯೋತ್ಪಾದಕರಿರುವ ಬಗ್ಗೆ ಶಂಕೆ ವ್ಯಕ್ತವಾದ ಕಾರಣ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಿಯಾಸಿ ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದರು.
ಜಮ್ಮು ಭಾಗದಲ್ಲಿರುವ ಗಡಿ ಜಿಲ್ಲೆಗಳಾದ ಪೂಂಚ್, ರಾಜೌರಿ, ಡೊಡಾ ಮತ್ತು ರಿಯಾಸಿಯಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.