ಕೋಲ್ಕತ್ತ: ಜಾದವಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಆಗಸ್ಟ್ 9ರಂದು ಹಾಸ್ಟೆಲ್ ಕಟ್ಟಡದ ಎರಡನೇ ಅಂತಸ್ತಿನಿಂದ ಬಿದ್ದು ಮೃತಪಟ್ಟಿದ್ದ ವಿದ್ಯಾರ್ಥಿಯು ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ವಿದ್ಯಾರ್ಥಿಯ ಸಾವಿಗೆ ರ‍್ಯಾಗಿಂಗ್, ಲೈಂಗಿಕ ಕಿರುಕುಳ ಕಾರಣ ಎನ್ನಲಾಗಿದೆ.
ಈ ಸಂಬಂಧ ವಿವಿಯ ಹಳೇ ವಿದ್ಯಾರ್ಥಿಯಾಗಿರುವ 13ನೇ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಆಗಸ್ಟ್ 24ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶಿಸಿದೆ.
ಇದಕ್ಕೂ ಮುನ್ನ ಹಳೇ ವಿದ್ಯಾರ್ಥಿಗಳೂ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿತ್ತು.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ವಿವಿಯ ವಿದ್ಯಾರ್ಥಿ ಮೃತಪಟ್ಟಿರುವುದು ದುರದೃಷ್ಟಕರವಷ್ಟೇ ಅಲ್ಲ ಅತ್ಯಂತ ಕಳವಳದ ಸಂಗತಿ. ಕಠಿಣ ಕ್ರಮ ಕೈಗೊಳ್ಳುವಂತೆ ಯುಜಿಸಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.