ADVERTISEMENT

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಜಗನ್ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 30 ಮೇ 2019, 7:32 IST
Last Updated 30 ಮೇ 2019, 7:32 IST
   

ಹೈದರಾಬಾದ್: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ವಿಜಯವಾಡದಲ್ಲಿರುವ ಇಂದಿರಾ ಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಾರ್ಟಿ 151 ಸೀಟುಗಳನ್ನು ಗೆದ್ದು ಅಧಿಕಾರಕ್ಕೇರಿದೆ.

ಪ್ರಮಾಣವಚನ ಸಮಾರಂಭದಲ್ಲಿ ಜಗನ್ ರೆಡ್ಡಿ ಅವರ ಅಮ್ಮ ವಿಜಯ ಲಕ್ಷ್ಮಿ, ಪತ್ನಿ ಭಾರತಿ, ಸಹೋದರಿ ಶರ್ಮಿಳಾ, ಮಗಳು ಹರ್ಷಾ ರೆಡ್ಡಿ ಮತ್ತು ವರ್ಷಾ ರೆಡ್ಡಿ ಭಾಗವಹಿಸಿದ್ದಾರೆ. ಈ ಸಮಾರಂಭದಲ್ಲಿ 20,000 ಜನರು ಭಾಗವಹಿಸಿದ್ದರು.

ADVERTISEMENT

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಡಿಎಂಕೆ ಮುಖ್ಯಸ್ಥ ಎಂ.ಕೆ, ಸ್ಟಾಲಿನ್, ಪಾಂಡಿಚ್ಚೇರಿ ಸಚಿವ ಮಲ್ಲಡಿ ಕೃಷ್ಣ ರಾವ್ ಮೊದಲಾದ ಗಣ್ಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರನ್ನು ಜಗನ್ ಆಮಂತ್ರಿಸಿದ್ದರೂ ಅವರುಕಾರ್ಯಕ್ರಮಕ್ಕೆ ಬರಲಿಲ್ಲ. ಜಗನ್ ಅವರನ್ನು ಅಭಿನಂದಿಸುವುದಕ್ಕಾಗಿ ಟಿಡಿಪಿ ಪಕ್ಷದ ಪ್ರತಿನಿಧಿಯನ್ನು ಜಗನ್ ನಿವಾಸಕ್ಕೆ ಕಳುಹಿಸಿಕೊಡಲು ಚಂದ್ರಬಾಬು ನಾಯ್ಡು ನಿರ್ಧರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.