ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರವು ಸಣ್ಣ ವ್ಯಾಪಾರಿಗಳು ಹಾಗೂ ಕುಶಲಕರ್ಮಿಗಳಿಗೆ ಬ್ಯಾಂಕ್ ಮೂಲಕ ಬಡ್ಡಿ ರಹಿತ ಸಾಲ ನೀಡಲು ‘ಜಗನಣ್ಣ ಥೋಡು’ ಎಂಬ ಯೋಜನೆ ಜಾರಿಗೊಳಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಬುಧವಾರ ₹395 ಕೋಟಿ ಮೊತ್ತ ಬಿಡುಗಡೆ ಮಾಡಿದ್ದಾರೆ.
3.95 ಲಕ್ಷ ಫಲಾನುಭವಿಗಳಿಗೆ ತಲಾ ₹10 ಸಾವಿರ ಸಾಲ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಜಗನ್ ಅವರು ಆನ್‌ಲೈನ್ ಮೂಲಕ ಈ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.