ADVERTISEMENT

ಜಗನ್‌ ತಪ್ಪೇನು? ಪವನ್ ಕಲ್ಯಾಣ್ ಕೊಟ್ಟ ವಾರ್ನಿಂಗ್ ಎಂಥದ್ದು.. ಇಲ್ಲಿದೆ ಮಾಹಿತಿ

ಪಿಟಿಐ
Published 10 ನವೆಂಬರ್ 2024, 12:52 IST
Last Updated 10 ನವೆಂಬರ್ 2024, 12:52 IST
ನಟ ಪವನ್ ಕಲ್ಯಾಣ್
ನಟ ಪವನ್ ಕಲ್ಯಾಣ್   

ಗುಂಟೂರು(ಆಂಧ್ರ ಪ್ರದೇಶ): ವೈಎಸ್‌ಆರ್‌ಸಿಪಿ ಪಕ್ಷದ ಅಧ್ಯಕ್ಷ ವೈ.ಎಸ್. ಜಗನ್ ಮೋಹನ ರೆಡ್ಡಿ ಅವರು, ಐಪಿಎಸ್ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿರುವ ಡಿಸಿಎಂ ಪವನ್ ಕಲ್ಯಾಣ್, ಅಧಿಕಾರಿಗಳಿಗೆ ಏನಾದರೂ ತೊಂದರೆಯಾದರೆ ಜಗನ್ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿದೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ಕೊಡುತ್ತಿರುವ ಅಧಿಕಾರಿಗಳನ್ನು ಭವಿಷ್ಯದ ವೈಎಸ್‌ಆರ್‌ಸಿಪಿ ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂಬ ಜಗನ್ ಹೇಳಿಕೆ ಬಗ್ಗೆ ಪವನ್ ಪ್ರತಿಕ್ರಿಯಿಸಿದ್ದಾರೆ.

ಜಗನ್ ಸಹ ಒಬ್ಬ ಶಾಸಕರಾಗಿದ್ದಾರೆ ಎಂದ ಪವನ್, ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಅದಕ್ಷ ಸರ್ಕಾರವಲ್ಲ ಎಂದಿದ್ದಾರೆ.

ADVERTISEMENT

ಅಲ್ಲದೆ, ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರು ಭದ್ರತೆಗಾಗಿ ಅರ್ಜಿ ಸಲ್ಲಿಸಿದರೆ, ಸರ್ಕಾರವು ಅವರ ವಿರುದ್ಧದ ಬೆದರಿಕೆಗಳನ್ನು ಪರಿಶೀಲನೆ ನಡೆಸಿ, ಅದಕ್ಕೆ ಅನುಗುಣವಾಗಿ ಭದ್ರತೆಯನ್ನು ನೀಡುತ್ತದೆ ಎಂದು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಭರವಸೆ ನೀಡಿದ್ದಾರೆ.

ಮಹಿಳೆಯರ ರಕ್ಷಣೆಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿರುವಂತೆಯೇ ರಾಜ್ಯದಲ್ಲೂ ‘ನೆರೆಹೊರೆಯ ರಕ್ಷಣಾ ಸಮಿತಿ’ಗಳನ್ನು ಸ್ಥಾಪಿಸಬೇಕು ಎಂದು ಅವರು ಹೇಳಿದ್ದಾರೆ. ನಾನು ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.