ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂದರ್ಭದಲ್ಲಿ ನಡೆದ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ದಾಖಲಾಗಿರುವ ಕೊಲೆ ಪ್ರಕರಣದ ವಿಚಾರಣೆ ಮುಂದುವರಿಸಲು ದೆಹಲಿ ಹೈಕೋರ್ಟ್ ಸಮ್ಮತಿಸಿದೆ.
ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ಕೋರಿ ಟೈಟ್ಲರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ, ‘ನ.29ರಂದು ದೆಹಲಿ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸಬಹುದು’ ಎಂದು ಸ್ಪಷ್ಟಪಡಿಸಿದರು.
‘ವಿಚಾರಣೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ. ಆದರೆ, ಇದು ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ’ ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಆಗಸ್ಟ್‌ನಲ್ಲಿ ದೆಹಲಿ ನ್ಯಾಯಾಲಯವು ಟೈಟ್ಲರ್‌ಗೆ ನಿರೀಕ್ಷಣಾ ಜಾಮೀನು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.