ಪುಣೆ: ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಗಸ್ತು ಕುರಿತ ಮಹತ್ವದ ಒಪ್ಪಂದಕ್ಕೆ ಸಂಬಂಧಿಸಿದಂತೆ ಊಹೆಗೂ ನಿಲುಕದ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸಿದ ಸೇನೆ ಮತ್ತು ಚತುರ ರಾಜತಾಂತ್ರಿಕ ಕಾರ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶ್ಲಾಘಿಸಿದ್ದಾರೆ.
ಪುಣೆಯಲ್ಲಿ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ‘ಸಂಬಂಧಗಳು ಸಹಜ ಸ್ಥಿತಿಗೆ ಬರಲು ಮತ್ತು ವಿಶ್ವಾಸ ವೃದ್ಧಿಗೆ ಸಮಯ ತೆಗೆದುಕೊಳ್ಳುತ್ತದೆ’ ಎಂದು ಹೇಳಿದರು.
ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಭೇಟಿಯಾದಾಗ, ಈ ವಿಷಯದಲ್ಲಿ ಎರಡೂ ದೇಶಗಳ ವಿದೇಶಾಂಗ ಸಚಿವರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರು ಹೇಗೆ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸಲಾಯಿತು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.