ನವದೆಹಲಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ಹುತಾತ್ಮರ ತ್ಯಾಗ, ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸಾಗಿಸಲು ಹಾಗೂ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ. ಜಲಿಯನ್ ವಾಲಾಬಾಗ್‌ನಲ್ಲಿ ಈ ದಿನದಂದು ಹುತಾತ್ಮರಾದ ಎಲ್ಲರ ತ್ಯಾಗವನ್ನು ನಾನು ಸ್ಮರಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಬ್ರಿಟಿಷ್ ಆಡಳಿತದಲ್ಲಿ ರೌಲತ್ ಕಾಯಿದೆಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದ ನೂರಾರು ಜನರನ್ನು ಪಂಜಾಬ್‌ನ ಅಮೃತಸರದ ಜಲಿಯನ್ ವಾಲಾಬಾಗ್‌ನಲ್ಲಿ 1919ರ ಏಪ್ರಿಲ್ 13ರಂದು ಬ್ರಿಟಿಷ್ ಪಡೆಗಳು ಗುಂಡಿಕ್ಕಿ ಹತ್ಯೆ ಮಾಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.