ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್–ಎ–ಮೊಹಮ್ಮದ್ (ಜೆಇಎಂ) ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಂನ ಅಹ್ವಾಟೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡು ಹಾರಿಸಿದರು. ಈ ವೇಳೆ ಎನ್‌ಕೌಂಟರ್ ನಡೆಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ ಹೊಂದಿದ್ದು, ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.