ಪುಲ್ವಾಮಾ: ಇಲ್ಲಿನ ಕಂಗಾನ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಮೃತರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಸದ್ಯ ಆ ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಇದಕ್ಕೂ ಮುನ್ನ ಮಂಗಳವಾರ, ಟ್ರಾಲ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕರು ಮೃತಪಟ್ಟಿದ್ದರು. ಅವರಿಂದ ಎರಡು ಪಿಸ್ತೂಲ್‌ಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.