ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಕಾರೊಂದು ಸ್ಕಿಡ್ ಆಗಿ ಕಮರಿಗೆ ಬಿದ್ದ ಪರಿಣಾಮ ಐದು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ, ಇಬ್ಬರು ಮಹಿಳೆಯರು ಸೇರಿದಂತೆ 6ರಿಂದ 16 ವರ್ಷದೊಳಗಿನ ಐವರು ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಕಿಶ್ತ್ವಾರ್ ಸಿಂಥನ್ ಟಾಪ್ ಮೂಲಕ ಮಾರ್ವಾ ಕಡೆಗೆ ತೆರಳುತ್ತಿದ್ದಾಗ ಕಾರು ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.