ADVERTISEMENT

Jammu Polls | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಹಿಂಪಡೆದ BJP

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಆಗಸ್ಟ್ 2024, 5:25 IST
Last Updated 26 ಆಗಸ್ಟ್ 2024, 5:25 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

–ರಾಯಿಟರ್ಸ್ ಚಿತ್ರ

ನವದೆಹಲಿ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಸೋಮವಾರ) ಪ್ರಕಟಿಸಿತ್ತು. ಆದರೆ, ಕೆಲವೇ ಗಂಟೆಗಳಲ್ಲಿ ಈ ಪಟ್ಟಿಯನ್ನು ಹಿಂಪಡೆಯಲಾಗಿದೆ.

ADVERTISEMENT

ಪುಲ್ವಾಮಾ ಜಿಲ್ಲೆಯ ರಾಜ್‌ಪೋರಾ ವಿಧಾನಸಭಾ ಕ್ಷೇತ್ರದಿಂದ ಅರ್ಷಿದ್ ಭಟ್, ಶೋಪಿಯಾನ್‌ನಿಂದ ಜಾವೇದ್ ಅಹ್ಮದ್ ಖಾದ್ರಿ, ಅನಂತನಾಗ್ ಪಶ್ಚಿಮದಿಂದ ಮೊಹಮ್ಮದ್ ರಫೀಕ್ ವಾನಿ, ಅನಂತನಾಗ್‌ನಿಂದ ಸೈಯದ್ ವಜಾಹತ್, ಕಿಶ್ತ್ವಾರ್ ವಿಧಾನಸಭೆ ಕ್ಷೇತ್ರದಿಂದ ಸುಶ್ರೀ ಶಗುನ್ ಪರಿಹಾರ್ ಮತ್ತು ದೋಡಾದಿಂದ ಗಜಯ್ ಸಿಂಗ್ ರಾಣಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.

ರಿಯಾಸಿ ಕ್ಷೇತ್ರದಿಂದ ಕುಲದೀಪ್ ರಾಜ್ ದುಬೆ, ಮಾತಾ ವೈಷ್ಣೋದೇವಿ ಕ್ಷೇತ್ರದಿಂದ ರೋಹಿತ್, ಪೂಂಚ್ ಹವೇಲಿ ಕ್ಷೇತ್ರದಿಂದ ಚೌಧರಿ ಅಬ್ದುಲ್ ಘನಿ, ಉಧಮ್‌ಪುರ ಪಶ್ಚಿಮ ಕ್ಷೇತ್ರದಿಂದ ಪವನ್ ಗುಪ್ತಾ, ರಾಮಗಢ (ಎಸ್‌ಸಿ ಮೀಸಲು) ಕ್ಷೇತ್ರದಿಂದ ಡಾ. ದೇವಿಂದರ್ ಕುಮಾರ್ ಮಣಿಯಾಲ್ ಹಾಗೂ ಅಖ್ನೂರ್‌ ಕ್ಷೇತ್ರದಿಂದ ಮೋಹನ್ ಲಾಲ್ ಭಗತ್‌ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿತ್ತು.

ಒಟ್ಟು 90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಅಧಿಸೂಚನೆಯನ್ನು ಈಚೆಗೆ ಚುನಾವಣಾ ಆಯೋಗವು ಪ್ರಕಟಿಸಿದೆ. ಸೆ.18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸೆ. 25ರಂದು 2ನೇ ಹಂತ ಹಾಗೂ ಅ. 1ರಂದು ಮೂರನೇ ಮತ್ತು ಅಂತಿಮ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಒಟ್ಟು 90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಅಧಿಸೂಚನೆಯನ್ನು ಈಚೆಗೆ ಚುನಾವಣಾ ಆಯೋಗವು ಪ್ರಕಟಿಸಿದೆ. ಸೆ.18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸೆ. 25ರಂದು 2ನೇ ಹಂತ ಹಾಗೂ ಅ. 1ರಂದು ಮೂರನೇ ಮತ್ತು ಅಂತಿಮ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯು (ಸಿಇಸಿ) ಭಾನುವಾರ ಸಂಜೆ ಸಭೆ ನಡೆಸಿತ್ತು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಹಾಗೂ ಜಮ್ಮು ಮತ್ತು ಕಾಶ್ಮೀರದ ಕೆಲವು ನಾಯಕರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.