ADVERTISEMENT

ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಪಿಟಿಐ
Published 16 ಸೆಪ್ಟೆಂಬರ್ 2024, 20:49 IST
Last Updated 16 ಸೆಪ್ಟೆಂಬರ್ 2024, 20:49 IST
<div class="paragraphs"><p>ಶ್ರೀನಗರದ ಪಕ್ಷದ ಕಚೇರಿಯಲ್ಲಿ ಎಐಸಿಸಿ ವಕ್ತಾರ ಪವನ್‌ ಖೇರಾ, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ತಾರೀಕ್‌ ಅಹಮದ್‌ ಅವರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು</p></div>

ಶ್ರೀನಗರದ ಪಕ್ಷದ ಕಚೇರಿಯಲ್ಲಿ ಎಐಸಿಸಿ ವಕ್ತಾರ ಪವನ್‌ ಖೇರಾ, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ತಾರೀಕ್‌ ಅಹಮದ್‌ ಅವರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು

   

–ಪಿಟಿಐ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು ಸೋಮವಾರ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ರೈತರು, ಮಹಿಳೆಯರು, ಯುವಕರ ಅಭಿವೃದ್ಧಿಗೆ ಆದ್ಯತೆ ನೀಡುವ ಭರವಸೆ ನೀಡಿದೆ.

ADVERTISEMENT

ಪ್ರಾಕೃತಿಕ ವಿಕೋಪಕ್ಕೆ ತುತ್ತಾಗುವ ಎಲ್ಲ ಬೆಳೆಗಳಿಗೂ ವಿಮೆ, ಸೇಬುಹಣ್ಣಿಗೆ ಕನಿಷ್ಠ ₹72 ಬೆಂಬಲ ಬೆಲೆ ಘೋಷಿಸಿರುವುದು ಪ್ರಣಾಳಿಕೆಯ ಪ್ರಮುಖ ಅಂಶಗಳು.

ಪಕ್ಷದ ಕಚೇರಿಯಲ್ಲಿ ಎಐಸಿಸಿ ವಕ್ತಾರ ಪವನ್‌ ಖೇರಾ, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ತಾರೀಕ್‌ ಅಹಮದ್‌ ಅವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

ಪ್ರಣಾಳಿಕೆಯ ಪ್ರಮುಖಾಂಶಗಳು:

  • ಭೂರಹಿತ ಕುಟುಂಬಗಳಿಗೆ ವಾರ್ಷಿಕ ₹4ಸಾವಿರ ಹೆಚ್ಚುವರಿ ಆರ್ಥಿಕ ನೆರವು

  • ಭೂರಹಿತರಿಗೆ ರಾಜ್ಯ ಸರ್ಕಾರದ ಭೂಮಿಯನ್ನು 99 ವರ್ಷಗಳಿಗೆ ಗುತ್ತಿಗೆ

  • ಶೇಕಡಾ 100ರಷ್ಟು ನೀರಾವರಿ ವ್ಯವಸ್ಥೆಗೆ ಆದ್ಯತೆ

  • ನಿರುದ್ಯೋಗಿ ಯುವಕರಿಗೆ ಮಾಸಿಕ ₹3,500 ಭತ್ಯೆ

  • 1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.