ಶ್ರೀನಗರ:ಈಗಾಗಲೇ ಬಂಧನದಲ್ಲಿದ್ದಮಾಜಿ ಐಎಎಸ್ ಅಧಿಕಾರಿ ಮತ್ತು ರಾಜಕಾರಣಿ ಶಾ ಫೈಸಲ್ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯಿದೆಯನ್ನು ಹೇರುವ ಮೂಲಕ ಜಮ್ಮು ಮತ್ತು ಕಾಶ್ಮೀರ ಆಡಳಿತವುಬಂಧನ ಅವಧಿಯನ್ನು ವಿಸ್ತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರ ರಾತ್ರಿ ಸಾರ್ವಜನಿಕ ಹಿತಾಸಕ್ತಿ ಕಾಯಿದೆ ಅಡಿ ಫೈಸಲ್ ಅವರ ಬಂಧನ ಅವಧಿಯನ್ನುವಿಸ್ತರಿಸಲಾಗಿದೆ.
ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು 6 ತಿಂಗಳು ಗೃಹಬಂಧನದಲ್ಲಿರಿಸಲಾಗಿತ್ತು. ಬಂಧನ ಅವಧಿ ಮುಗಿಯಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿರುವಾಗ ಫೆಬ್ರುವರಿ 6ರ ರಾತ್ರಿ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಹೇರಿ ಬಂಧನದ ಅವಧಿ ವಿಸ್ತರಿಸಲಾಗಿದೆ.
ಕಳೆದ ವರ್ಷ ಆಗಸ್ಟ್ 13ರಂದು ಇಸ್ತಾಂಬುಲ್‌ಗೆ ಹೊರಟಿದ್ದ ಫೈಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಬಳಿಕ ಅವರನ್ನು ಶ್ರೀನಗರಕ್ಕೆ ಕಳುಹಿಸಲಾಗಿತ್ತು. ನಂತರ ಸಾರ್ವಜನಿಕ ಸುರಕ್ಷತೆ ಕಾಯ್ದೆ ಅಡಿಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಕಾಶ್ಮೀರದ ಸಮಸ್ಯೆಗೆ ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದ ಐಎಎಸ್ ಅಧಿಕಾರಿ ಶಾ ಫೈಸಲ್ ರಾಜೀನಾಮೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.