ADVERTISEMENT

ಕಾಶ್ಮೀರದ ಬಾರಾಮುಲ್ಲಾದಲ್ಲಿ ಬೆಂಕಿ ಆಕಸ್ಮಿಕ, ಹಲವರಿಗೆ ಗಾಯ, ಮನೆಗಳಿಗೆ ಹಾನಿ

ಏಜೆನ್ಸೀಸ್
Published 11 ಜೂನ್ 2021, 6:23 IST
Last Updated 11 ಜೂನ್ 2021, 6:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾರಾಮುಲ್ಲಾ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪಟ್ಟಣದ ನೂರ್‌ಬಾಗ್ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿವೆ.

ಭಾರತೀಯ ಸೇನೆಯ ಮಾಹಿತಿ ಪ್ರಕಾರ, ಗುರುವಾರ ರಾತ್ರಿ 9.30ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯ ನೆರವಿನಿಂದ ಮಧ್ಯ ರಾತ್ರಿ 1ರ ಹೊತ್ತಿಗೆ ನಿಯಂತ್ರಣಕ್ಕೆ ತರಲಾಯಿತು.

ಅಗ್ನಿ ಅವಘಡ ಹಿಂದಿನ ನಿಖರ ಕಾರಣಗಳು ತಿಳಿದು ಬಂದಿಲ್ಲ. ಪ್ರದೇಶದಲ್ಲಿ ನೆಲೆಗೊಂಡಿರುವ ಭಾರತೀಯ ಸೇನೆಯ 'ಕಂಪನಿ ಆಪರೇಂಟಿಂಗ್ ಬೇಸ್' (ಸಿಒಬಿ) ನ '44 ಆರ್‌ಆರ್' ಪರಿಸ್ಥಿತಿಯನ್ನು ನಿಭಾಯಿಸಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆರರಿಂದ ಏಳು ಮಂದಿ ಗಾಯಗೊಂಡಿದ್ದಾರೆ. 170ರಿಂದ 200 ಮಂದಿ ತೊಂದರೆಗೊಳಗಾದರು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.