ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಚುರುಕುಗೊಂಡಿದೆ.
ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಆತ ಹಲವು ದಿನಗಳಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದು, ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ. ಆತನಿಂದ ಒಂದು ಬಂದೂಕು, 2 ಮ್ಯಾಗಜೀನ್‌ಗಳು ಸೇರಿದಂತೆ 30 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಉಗ್ರರ ಬಂಧನ: ಎಲ್ಇಟಿಯ ಇಬ್ಬರು ಹೈಬ್ರಿಡ್ ಭಯೋತ್ಪಾದಕರಾದ ತಾರಿಕ್ ಅಹ್ ವಾನಿ ಮತ್ತು ಇಶ್ಫಾಕ್ ಅಹ್ ವಾನಿಯನ್ನು ಸೋಪೋರ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಎರಡು ಬಂದೂಕು, ಎರಡು ಮ್ಯಾಗಜೀನ್‌ಗಳು ಮತ್ತು 11 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಸತತ ಕಾರ್ಯಾಚರಣೆಯನ್ನು ನಡೆಸುತ್ತಲೇ ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.