ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 19 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೊಳಿಸಿದೆ.
ಸೋಮವಾರ ತಡರಾತ್ರಿ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದೆ. ಎನ್‌ಎಸ್‌ಯುಐ ಮಾಜಿ ಅಧ್ಯಕ್ಷ ನೀರಜ್ ಕುಂದನ್ ಅವರು ಬಿಷ್ಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಬಸೋಲಿ ಕ್ಷೇತ್ರದಿಂದ ಚೌಧರಿ ಲಾಲ್ ಸಿಂಗ್ ಮತ್ತು ಆರ್.ಎಸ್. ಪುರ ಜಮ್ಮು ದಕ್ಷಿಣದಿಂದ ರಾಮನ್ ಬಲ್ಲಾ ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಲ್ಲಿದೆ:
ಕಾಂಗ್ರೆಸ್-ಎನ್‌ಸಿ ಮೈತ್ರಿ...
90 ಸದ್ಯಸ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿ ಮಾಡಿಕೊಂಡಿದ್ದು, ಅನುಕ್ರಮವಾಗಿ 32 ಹಾಗೂ 51 ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ.
ಸಿಪಿಐ(ಎಂ) ಮತ್ತು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಪ್ಯಾಂಥರ್ಸ್ ಪಾರ್ಟಿಗೆ (ಜೆಕೆಎನ್‌ಪಿಪಿ) ತಲಾ ಒಂದು ಸ್ಥಾನವನ್ನು ಕಲ್ಪಿಸಲಾಗಿದೆ. ಐದು ಕ್ಷೇತ್ರಗಳಲ್ಲಿ ಸೌಹಾರ್ದ ಸ್ಪರ್ಧೆ ಏರ್ಪಡಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಂದು ಮೊದಲ ಹಂತ, ಸೆ.25ರಂದು ಎರಡನೇ ಹಂತ ಮತ್ತು ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.